ನವದೆಹಲಿ : ಚಳಿಗಾಲದ ಸಂಸತ್ ಅಧಿವೇಶನವೂ (Parliament Session) ಡಿಸೆಂಬರ್ 4ರಿಂದ ಆರಂಭಗೊಂಡು 22ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಲಾಯದಿಂದ ಮಾಹಿತಿ ಲಭ್ಯವಾಗಿದೆ. ಇದಕ್ಕೂ ಮುನ್ನ ಡಿಸೆಂಬರ್ 2 ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಸುಗಮ ಕಲಾಪಕ್ಕಾಗಿ ಪ್ರತಿಪಕ್ಷಗಳ ಜೊತೆಗೆ ಮಾತುಕತೆ ನಡೆಯಲಿದೆ.
ಡಿಸೆಂಬರ್ ಮೂರರಂದು ಪ್ರತಿಪಕ್ಷಗಳ ಸಭೆ ನಡೆಯಬೇಕಿತ್ತು ಅಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 2 ರಂದು ಸಭೆ ನಡೆಸಲು ನಿರ್ಧರಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾಹಿತಿಯನ್ನು ಖಚಿತಪಡಿಸಿದ್ದಾರೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಸುವರ್ಣವಾಕಾಶ..! SBIನಲ್ಲಿ ಖಾಲಿಯಿದೆ 8283 ಹುದ್ದೆಗಳು
ಈ ಬಾರಿಯ ಅಧಿವೇಶನದಲ್ಲಿ ಮಹತ್ವದ IPC, CrPC ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಬಯಸುವ ಮೂರು ಪ್ರಮುಖ ಮಸೂದೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಈ ಮಸೂದೆಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪರಿಶೀಲಿಸುತ್ತಿದೆ. ಹೊಸ ಮಸೂದೆಗಳನ್ನು ಶೀಘ್ರದಲ್ಲೇ ಅಂಗೀಕರಿಸುವ ಸಾಧ್ಯತೆ ಇದೆ.
ಈಗಾಗಲೇ ಲೋಕಸಭೆಯಲ್ಲಿ (Loksabhe) ಇಂಡಿಯನ್ ಪೀನಲ್ ಕೋಡ್ (ಭಾರತೀಯ ದಂಡ ಸಂಹಿತೆ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಇಂಡಿಯನ್ ಎವಿಡನ್ಸ್ ಆ್ಯಕ್ಟ್ (ಭಾರತೀಯ ಸಾಕ್ಷ್ಯ ಕಾಯ್ದೆ) ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಮೂರು ಕಾಯ್ದೆಗಳಲ್ಲಿ 300ಕ್ಕೂ ಹೆಚ್ಚು ಬದಲಾವಣೆಗಳನ್ನು ನೂತನ ಮಸೂದೆಗಳಲ್ಲಿ ತರಲಾಗಿದೆ.