ಬೆಂಗಳೂರು:- ರೈತರು, ಮಠಗಳ ಆಸ್ತಿಯ ಪಹಣಿಯಲ್ಲಿ ವಕ್ಫ್ ಆಸ್ತಿ, ಕರ್ನಾಟಕ ಸರ್ಕಾರ ಎಂದು ದಾಖಲಾಗಿ ರಾಜ್ಯಾದ್ಯಂತ ವಿವಾದ ಸೃಷ್ಟಿಯಾಗಿದೆ.
ಅಲ್ಲದೇ ಇದೇ ವಿಚಾರ ಇಟ್ಟುಕೊಂಡು ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕುತ್ತಿದೆ.
ಆಲದಮರಕ್ಕೆ ನಿನ್ನನ್ನು ನೇಣು ಹಾಕಿ ಸಾಯಿಸ್ಬೇಕು: ಸಚಿವ ಜಮೀರ್ ವಿರುದ್ಧ ಮುತಾಲಿಕ್ ಕಿಡಿ!
ಇನ್ನೂ ವಿವಾದ ಭುಗಿಲೇಳುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರೈತರಿಗೆ ನೀಡಿದ್ದ ವಕ್ಫ್ ನೋಟಿಸ್ ವಾಪಸ್ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್ಗಳನ್ನು ತಕ್ಷಣ ವಾಪಸ್ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.
ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.
ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ.