ಬೆಂಗಳೂರು:- ಸಂವಿಧಾನ ಇಲ್ಲದಿದ್ದರೆ ನಮ್ಮ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಮ್ಮೆಲ್ಲರ ಪುಣ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ಮಾಡಿದ್ದಾರೆ. ಇಂದು ನಮ್ಮ ಸಂವಿಧಾನ ಅನುಷ್ಠಾನ ತಂದ ಪವಿತ್ರ ದಿನ. ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ. ಎಲ್ಲರ ಧರ್ಮ, ಜಾತಿ ಒಂದೇ ಎಂದು ಸಾರಿದ ಪವಿತ್ರವಾದ ದಿನವಿದು. ಸಂವಿಧಾನ ನಮ್ಮ ಬದಕು, ಇದನ್ನು ನೆಹರು ನಾಯಕತ್ವದಲ್ಲಿ ಅಂಬೇಡ್ಕರ್ ಅವರಿಗೆ ಜವಾಬ್ದಾರಿ ಕೊಟ್ಟರು. ಸಂವಿಧಾನ ನಮಗೆ ನಾವು ಅರ್ಪಿಸಿದ ದಿನ. ಸಂವಿಧಾನ ಇಲ್ಲದಿದ್ದರೆ ನಮ್ಮ ಪ್ರಜಾಪ್ರಭುತ್ವ ಆತ್ಮ ಇರುತ್ತಿರಲಿಲ್ಲ. ಈ ಸಂವಿಧಾನವನ್ನು ಉಳಿಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ಉಳಿಸಲು ಶತ್ರುಗಳ ವಿರುದ್ಧ ಹೋರಾಡಬೇಕಿದೆ: CM ಸಿದ್ದರಾಮಯ್ಯ!
ಈ ಪೂರ್ತಿ ವರ್ಷ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಸಮಾವೇಶ ಆಗಬೇಕು. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಆಗಬೇಕು. ಈ ಸಮಾವೇಶ ಸಂಬಂಧಿಸಿದಂತೆ ಸಂವಿಧಾನ ರಕ್ಷಣೆಗೆ ವ್ಯಾಪಕವಾಗಿ ಚರ್ಚೆ ಆಗಬೇಕು ಎಂದರು.
ಇದೇ ವೇಳೆ ಬೆಂಗಳೂರು ಅಭಿವೃದ್ಧಿಗೆ ಕೇಂದ್ರಕ್ಕೆ ಪತ್ರ ಬರೆದ ವಿಚಾರವಾಗಿ ಮಾತನಾಡಿ, ಬೆಂಗಳೂರು ಮುಖಾಂತರ ಭಾರತ ನೋಡಲಾಗುತ್ತಿದೆ. ಇದೀಗ ಬೆಂಗಳೂರು ಅಂತಾರಾಷ್ಟ್ರೀಯ ನಗರವಾಗಿದೆ. ಜೊತೆಗೆ ಅತೀ ಹೆಚ್ಚು ತೆರಿಗೆ ಸಂಗ್ರಹಣೆ ಆಗುತ್ತಿದೆ. ಹೀಗಾಗಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇವೆ. ಬೇರೆ ದೇಶದ ದೂತವಾಸ ಕಚೇರಿಗಳು ಇಲ್ಲಿವೆ. ಯಾವುದೇ ಗಡವು ನಾವು ಕೊಡುವುದಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದೇವೆ. ಅವರು ಇಲ್ಲಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ. ಜೋಶಿ, ಶೆಟ್ಟರ್ ಸೇರಿದಂತೆ ಅನೇಕ ಹಿರಿಯ ನಾಯಕರಿದ್ದಾರೆ ಅವರಿಗೆ ಭದ್ರಾ, ಮೇಕೆದಾಟುವಿಗೆ ಅನುಮತಿ ಕೊಡಿಸಬೇಕಾಗಿ ಮನವಿ ಮಾಡಿದ್ದೇವೆ ಎಂದರು.