ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಜನಸ್ಪಂದನ ಹೆಸರಿನಲ್ಲಿ ಜನತಾದರ್ಶನ (Janatadarshan) ನಡೆಸುತ್ತಿದ್ದು, ಮೊದಲಿಗೆ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಅಹವಾಲನ್ನು (Report) ಸ್ವೀಕರಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನವನ್ನು ಆಯೋಜಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು, ಮಹಿಳೆಯರು ಜನತಾ ದರ್ಶನಕ್ಕೆ ಆಗಮಿಸಿದ್ದು, ಸಿಎಂ ಜನತಾದರ್ಶನಕ್ಕೆ ಬಿಗಿ ಪೊಲೀಸ್ ಕಾವಲು ನೇಮಿಸಲಾಗಿದೆ. ಅಹವಾಲು ಸ್ವೀಕಾರ ಮತ್ತು ಪರಿಶೀಲನೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಇತರೇ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1,000 ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದಲ್ಲಿ ಹಾಜರಿದ್ದಾರೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ ಇದಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಜನತಾ ದರ್ಶನದಲ್ಲಿ 20 ಕೌಂಟರ್ಗಳು ಹಾಗೂ ನೂರಕ್ಕೂ ಹೆಚ್ಚು ಅಧಿಕಾರಿಗಳ ಉಪಸ್ಥಿತಿಯಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಎರಡು ಕೌಂಟರ್ಗಳನ್ನು ಮೀಸಲಿರಿಸಲಾಗಿದೆ. ಅಹವಾಲುಗಳ ದಾಖಲೀಕರಣಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಲವು ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ. ಬಳಿಕ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ
![](https://ainlivenews.com/wp-content/uploads/2024/01/Ad-Banner-copy-scaled.jpg)