ಮಂಡ್ಯ:-ಗ್ಯಾರಂಟಿಯಿಂದ ಹಳ್ಳಿ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
Bommai: ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಾಣಾಳಿಕೆ – ಬೊಮ್ಮಾಯಿ!
ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ಹಿನ್ನಲೆ ಮಂಡ್ಯದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಹೆಚ್ಡಿ ಕುಮಾರಸ್ವಾಮಿ ವಿರುದ್ದ ಪ್ರತಿಭಟನೆ ಮಾಡಲಾಗಿದೆ.
ಮಂಡ್ಯದ ಸಂಜಯ್ ವೃತ್ತದಲ್ಲಿ
ಹಳೆ ಮೈ-ಬೆಂ ಹೆದ್ದಾರಿ ತಡೆದು ಹೋರಾಟ ಮಾಡಲಾಗಿದೆ. ಗೋ ಬ್ಯಾಕ್ ಕುಮಾರಸ್ವಾಮಿ, ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಗೋ ಬ್ಯಾಕ್ ಕುಮಾರಸ್ವಾಮಿ ಎಂಬ ಪೋಸ್ಟರ್ ಹಿಡಿದು ಕಿಡಿಕಾರಿದ್ದಾರೆ. ಹೆದ್ದಾರಿ ತಡೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥ ಆಗಿತ್ತು.