ಬೆಳಗಾವಿ: ಗೃಹ ಲಕ್ಷ್ಮೀ ಹಣದಿಂದ ಮಹಿಳೆಯರಿಗೆ ತುಂಬಾ ಅನುಕೂಲ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರೆಂಟಿಗಳಿಂದ ಬಡವರು, ಮಧ್ಯಮ ಹಾಗೂ ಎಲ್ಲಾ ವರ್ಗದ ಜನರಿಗೆ ಅನುಕೂಲ ಆಗುತ್ತಿದೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡ್ತಾರೆ. ಗೃಹ ಲಕ್ಷ್ಮೀ ಹಣದಿಂದ ಮಹಿಳೆಯರಿಗೆ ತುಂಬಾ ಅನುಕೂಲ ಆಗಿದೆ.
ಗುರುವಾರ ಈ ಕೆಲಸಗಳನ್ನೂ ಮಾಡಿದ್ರೆ ಸಂತೋಷ, ಸಮೃದ್ಧಿಯಿಂದ ನಿಮ್ಮ ಜೀವನ ತುಳುಕುತ್ತೆ..!
ಅತ್ತೆ ಸೊಸೆಗೆ ಜಗಳ ಆಗುತ್ತೆ ಅಂತಾ ಆರೋಪ ಮಾಡುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು. ಇನ್ನೂ 150 ಕೋಟಿ ಆಫರ್ ಹಾಗೂ ವಕ್ಫ್ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿವೈ ವಿಜಯೇಂದ್ರ ಸವಾಲು ಹಿನ್ನೆಲೆಯಲ್ಲಿ ವಿಜಯೇಂದ್ರಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ, ಅವರ ಕಾಲದಲ್ಲಿ ಒಂದೇ ಒಂದು ಪ್ರಕರಣ ಸಿಬಿಐಗೆ ಕೊಟ್ಟರಾ? ಯಾವ ನೈತಿಕತೆ ಇದೆ ನಮ್ಮನ್ನು ಪ್ರಶ್ನಿಸಲು ಎಂದು ತಿರುಗೇಟು ನೀಡಿದರು.