ಬೆಂಗಳೂರು: ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಮತ್ತು ಮಹಿಳೆಯರ ಪಾಲುದಾರಿಕೆ ಶೇ 25.1ನಿಂದ 30.2ಗೆ ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವವರ ಗಮನಕ್ಕೆ! ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ.
https://x.com/RLR_BTM/status/1795828541709492559?ref_src=twsrc%5Etfw%7Ctwcamp%5Etweetembed%7Ctwterm%5E1795828541709492559%7Ctwgr%5Efd4d0d2428a12bdbfbe853e306ea05eb814d8f7b%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fshakti-yojana-adds-to-karnatakas-gst-as-more-women-join-work-force-ramalingareddy-ggs-840902.html
ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ.ಕರ್ನಾಟಕ ಕಾಂಗ್ರೆಸ್ ನಮ್ಮ ನಾಗರಿಕರ ಕಲ್ಯಾಣವನ್ನು ಹೆಚ್ಚಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ತಮ್ಮ ಕುಟುಂಬಗಳನ್ನು ಕಾಳಜಿ ವಹಿಸುವ ಆರ್ಥಿಕ ಸಬಲೀಕರಣಕ್ಕೆ ಅರ್ಹರಾಗಿರುವ ಕಠಿಣ ಪರಿಶ್ರಮಿ ಮಹಿಳೆಯರಿಗೆ. ಶಕ್ತಿ ಯೋಜನೆ; ಸಬಲೀಕರಣಗೊಂಡ ಮಹಿಳೆಯರ ಪಯಣ ಎಂದು ಬರೆದುಕೊಂಡಿದ್ದಾರೆ.
Anna Bhagya Scheme: ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಇನ್ನೂ ಬಂದಿಲ್ವಾ..? ಈ ಕೆಲಸ ಮಾಡಿ ಸಾಕು
ಶಕ್ತಿ ಯೋಜನೆ ಜಾರಿ ಬಳಿಕ ಸದ್ಬಳಕೆ ಮಾಡಿಕೊಳ್ಳುತ್ತಿದ್ದ ಮಹಿಳೆಯರು ಫ್ರೀ ಸವಾರಿಯನ್ನು ಮತ್ತಷ್ಟು ಜೋರು ಮಾಡಿದ್ದರು. ಯೋಜನೆ ಆರಂಭವಾದ 18ನೇ ದಿನಕ್ಕೆ ಒಟ್ಟು 8 ಕೋಟಿಗೂ ಹೆಚ್ಚು ಮಹಿಳೆಯರು ಫ್ರೀಯಾಗಿ ಬಸ್ನಲ್ಲಿ ಸಂಚಾರ ಮಾಡಿದ್ದರು. 2024ರ ಏಪ್ರಿಲ್ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ನಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.