ದೇವನಹಳ್ಳಿ: ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಒಳ ಉಡುಪಿನಲ್ಲಿ ಅಡಗಿಸಿಟ್ಟುಕೊಂಡು ಸಾಗಿಸುತ್ತಿದ್ದ ಚಿನ್ನ ವಶ ಪಡೆಸಿಕೊಂಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತದ್ದ 49.52 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
ಇಬ್ಬರು ಮಹಿಳೆಯರು ರಾತ್ರಿ ದುಬೈನಿಂದ ಇಂಡಿಗೋ 6E1486 ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಮಹಿಳೆಯರ ಒಳ ಉಡುಪಿನಲ್ಲಿ 49.52 ಲಕ್ಷ ರೂ. ಮೌಲ್ಯದ 717 ಗ್ರಾಂ ಚಿನ್ನ ಪತ್ತೆಯಾಗಿದೆ. ಸದ್ಯ ಅಧಿಕಾರಿಗಳು ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಅಧಿಕಾರಿಗಳು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.