ಲಕ್ನೋ:ನನ್ನ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ ಎಂದು UP ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು,ಲಕ್ನೋದಲ್ಲಿ ಜಲಾವೃತ ರಸ್ತೆಯೊಂದರಲ್ಲಿ ಪುರುಷರ ಗುಂಪೊಂದು ಮಹಿಳೆಯ ಮೇಲೆ ಮಳೆ ನೀರನ್ನು ಎರಚಿ, ಹಲ್ಲೆ ನಡೆಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆರೋಪಿಗಳಿಗಾಗಿ ಅಧಿಕಾರಿಗಳು ಕೇವಲ “ಸದ್ಭಾವನಾ ರೈಲನ್ನು” ಓಡಿಸುವುದಿಲ್ಲ. ಅದರ ಬದಲಿಗೆ “ಬುಲೆಟ್ ಟ್ರೈನ್” ಮೂಲಕ ಶಿಕ್ಷೆಯನ್ನು ತ್ವರಿತಗೊಳಿಸುತ್ತಾರೆ ಎಂದು ಹೇಳಿದರು. ಈ ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಪವನ್ ಯಾದವ್ ಮತ್ತು ಮೊಹಮ್ಮದ್ ಅರ್ಬಾಜ್ ಎಂದು ಗುರುತಿಸಲಾಗಿದೆ. ನನ್ನ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆಯು ಒಂದು ಪ್ರಮುಖ ಆದ್ಯತೆಯಾಗಿದೆ ಎಂದು ಯೋಗಿ ಆದಿತ್ಯನಾಥ್ ಗುಡುಗಿದ್ದಾರೆ.
ಲೋಕಸಭೆ ಚುನಾವಣೆಯ ನಂತರ ಮೊದಲ ಬಾರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯುಪಿ ವಿಧಾನಸಭೆಯಲ್ಲಿ ಆಕ್ರಮಣಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಪೂರಕ ಬಜೆಟ್ ಕುರಿತು ಮಾತನಾಡಿದ ಸಿಎಂ ಯೋಗಿ ಎಸ್ಪಿ ಹಾಗೂ ಪಕ್ಷದೊಳಗಿನ ವಿರೋಧಿಗಳಿಗೆ ನೇರ ಸಂದೇಶ ನೀಡಿದ್ದಾರೆ. ಯೋಗಿ ತಮ್ಮ ಭಾಷಣದಲ್ಲಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ನಾನು ಯಾವುದೇ ಕೆಲಸ ಮಾಡಿ ಪ್ರತಿಷ್ಠೆ ಪಡೆಯಲು ಇಲ್ಲಿಗೆ ಬಂದಿಲ್ಲ. ಮಠದಲ್ಲಿಯೇ ಇದೆಲ್ಲ ಸಿಗುತ್ತಿತ್ತು. ನನ್ನ ಆಳ್ವಿಕೆಯಲ್ಲಿ ಯಾರು ಏನು ತಪ್ಪು ಮಾಡಿದರೂ ಅದಕ್ಕೆ ಶಿಕ್ಷೆ ಅನುಭವಿಸುತ್ತಾರೆ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸರ್ಕಾರ ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ. ನಮ್ಮ ಸರ್ಕಾರದಲ್ಲಿ ಬುಲೆಟ್ ರೈಲಿನ ವೇಗದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಯೋಗಿ ತಮ್ಮ ಭಾಷಣದಲ್ಲಿ ಗೋಮತಿ ನಗರದಲ್ಲಿ ನಡೆದ ಕಿರುಕುಳದ ಘಟನೆ ಮತ್ತು ಅಯೋಧ್ಯೆ ಅತ್ಯಾಚಾರ ಪ್ರಕರಣವನ್ನು ಪ್ರಸ್ತಾಪಿಸಿದರು. ಲಕ್ನೋದರ ಮಹಿಳೆಯರ ಕಿರುಕುಳಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅವರ ತಪ್ಪಿನಿಂದಾಗಿ ಆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ನಮ್ಮ ಸರ್ಕಾರ ಟಾರ್ಗೆಟ್ ಆಗುತ್ತಿದೆ ಎಂದಿದ್ದಾರೆ