ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಬಂಧನದ ವಾರೆಂಟ್ ಜಾರಿ ಮಾಡಲಾಗಿತ್ತು. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟನೆಯ ಮೂಲಕ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ. ಆರೋಪ ಹೊತ್ತ ಕಂಪನಿಗೆ ಕೆಲ ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆ. ಈ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.
2018-19 ರರ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣ ಹೂಡಿಕೆ ಮಾಡಿದ್ದೆ. ಇದೇ ಕಾರಣಕ್ಕೆ ಆ ಕಂಪನಿಗಳು ನನ್ನನ್ನು ನಿರ್ದೇಶಕನಾಗಿ ನೇಮಕಗೊಳಿಸಿದ್ದವು. ಆದಾಗ್ಯೂ ಸಹ ನಾನು ಆ ಕಂಪನಿಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರವನ್ನು ಹೊಂದಿರಲಿಲ್ಲ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.
Free Gas: ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ `ಗ್ಯಾಸ್ ಸಿಲಿಂಡರ್’.! ಹೀಗೆ ಅರ್ಜಿ ಸಲ್ಲಿಸಿ
ವೃತ್ತಿಪರ ಕ್ರಿಕೆಟಿಗನಾಗಿ, ನಿರೂಪಕನಾಗಿ, ವೀಕ್ಷಕ ವಿವರಣೆಗಾರನಾಗಿ ನನಗೆ ಆ ಕಂಪನಿಗಳ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ಸಮಯವಿರಲಿಲ್ಲ. ಅಲ್ಲದೆ ಆ ಕಂಪನಿಗಳ ದೈನಂದಿನ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸ್ಪಷ್ಟನೆ ನೀಡಿದ್ದಾರೆ.
ವಾಸ್ತವವಾಗಿ ನಾನು ಇದುವರೆಗೂ ಹಣ ಹೂಡಿಕೆ ಮಾಡಿರುವ ಇತರೆ ಕಂಪನಿಗಳಲ್ಲಿಯೂ ಕಾರ್ಯನಿರ್ವಾಹಕ ಪಾತ್ರವನ್ನು ವಹಿಸಿರುವುದಿಲ್ಲ. ಈಗ ಆರೋಪ ಎದುರಿಸುತ್ತಿರುವ ಕಂಪನಿಗಳು ನಾನು ಸಾಲದ ರೂಪದಲ್ಲಿ ನೀಡಿದ ಹಣವನ್ನು ಮರುಪಾವತಿಸಲು ವಿಫಲವಾಗಿವೆ ಎಂದು ಇದೇ ವೇಳೆ ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.