ಬೆಂಗಳೂರು :- ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪಕ್ಷಾತೀತವಾಗಿ ಕೆಲಸ ಮಾಡಲಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಭೆ ನಿರಂತರವಾಗಿ ಸಾಗುತ್ತಿದೆ. ಮೂರನೆ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿ ಮಾಡಲು ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇವೆ. ಚಿಕ್ಕಬಳ್ಳಾಪುರ ಮತ್ತು ರಾಮನಗರ ಸಮಗ್ರ ಅಭಿವೃದ್ಧಿ ಮಾಡಿದ್ದೆ ಕುಮಾರಸ್ವಾಮಿಯವರು..
ದೊಡ್ಡಬಳ್ಳಾಪುರದಲ್ಲಿ ದೇವೆಗೌಡ,ಕುಮಾರಸ್ವಾಮಿಯ ಅಭಿಮಾನಿಗಳು ಇದ್ದಾರೆ. ಡಾ.ಕೆ ಸುಧಾಕರ್ ಗೆಲುವಿಗೆ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು ಶ್ರಮದಿಂದ ಸಾಧ್ಯ ಎಂದರು. ಚಿಕ್ಕಬಳ್ಳಾಪುರ ಜೆಡಿಎಸ್ ಮಾಜಿ ಶಾಸಕ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿ, ಬಚ್ಚೆಗೌಡರ ನಮ್ಮ ಪಕ್ಷದ ಹಿರಿಯರು ಅವರ ಬಳಿ ನಮ್ಮ ತಂದೆ ಹಾಗೂ ನಾನು ಮಾತನಾಡಿದ್ದೆ.
ಅವರ ತೀರ್ಮಾನದ ಬಗ್ಗೆ ನಾನು ಏನು ಮಾತನಾಡಲ್ಲ ದೊಡ್ಡಬಳ್ಳಾಪುರದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.