ಮಹಾರಾಷ್ಟ್ರ:– ಮಹಾರಾಷ್ಟ್ರದಲ್ಲಿ ಮತ ಚಲಾಯಿಸಿ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಅವರು ಗಮನ ಸೆಳೆದಿದ್ದಾರೆ.
ನೀವು ನಿದ್ರೆಯಲ್ಲಿ ಮಾತಾಡೋ ಅಭ್ಯಾಸ ಇದ್ಯಾ!?, ಕಾರಣ ತಿಳಿಯಿರಿ!
ಜ್ಯೋತಿ ಅವರು 30ವರ್ಷದವರಾಗಿದ್ದು, 62.8 ಸೆಂ.ಮೀ ಎತ್ತರ ಇದ್ದಾರೆ. ನಾಗ್ಪುರ್ ದ ನಿವಾಸಿಯಾದ ಜ್ಯೋತಿ ಆಮ್ಗೆ ತಮ್ಮ ಪೋಷಕರ ಜೊತೆಗೆ ಮತಗಟ್ಟೆಗೆ ಆಗಮಿಸಿದರು.
ಈ ವೇಳೆ ಅಲ್ಲಿ ಸೇರಿದ್ದ ಜನರು ಅವರನ್ನು ಸಂತೋಷದಿಂದ ಸ್ವಾಗತಿಸಿದರು. ಅಧಿಕಾರಿಗಳು ಕೂಡ ಜವಾಬ್ದಾರಿ ಮೆರೆದ ಜ್ಯೋತಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2011ರಲ್ಲಿ ಜ್ಯೋತಿ ಅವರನ್ನು ವಿಶ್ವದ ಕುಬ್ಜ ಮಹಿಳೆ ಎಂಬುದಾಗಿ ಗಿನ್ನಿಸ್ ಸಂಸ್ಥೆ ಪ್ರಕಟಿಸಿತು.
ನಾನು ಇಂದು ನನ್ನ ಇಡೀ ಕುಟುಂಬದೊಂದಿಗೆ ಬಂದು ಮತ ಹಾಕಿದ್ದೇನೆ. ಪ್ರತಿಯೊಬ್ಬ ಮತದಾರರು ತಮ್ಮ ಮತವನ್ನು ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ ಏಕೆಂದರೆ ಅದು ನಮ್ಮ ಕರ್ತವ್ಯವಾಗಿದೆ ಎಂದರು. ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಮತ್ತು ಉತ್ತರ ಪ್ರದೇಶದಲ್ಲಿ ಮತದಾನ ನಡೆಯುತ್ತಿದೆ.
ಇದಲ್ಲದೇ ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಪುದುಚೇರಿಯಲ್ಲಿಯೂ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.