ಮುಂಬೈ ವಿರುದ್ಧ ರೋಚಕ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ ಹೊಸ ಚರಿತ್ರೆ ಬರೆದಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ
ನಿಮ್ಮ ಮನೆಯಲ್ಲೂ ಜೇಡ ಬಲೆ ಕಟ್ಟಿದ್ಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸಿವರ್ ಬ್ರಂಟ್ 59 ಎಸೆತಗಳಲ್ಲಿ 13 ಫೋರ್ಗಳೊಂದಿಗೆ ಅಜೇಯ 80 ರನ್ ಬಾರಿಸಿದರೆ, ನಾಯಕಿ ಹರ್ಮನ್ಪ್ರೀತ್ ಕೌರ್ 42 ರನ್ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 19.1 ಓವರ್ಗಳಲ್ಲಿ 164 ರನ್ ಬಾರಿಸಿ ಆಲೌಟ್ ಆಯಿತು.
165 ರನ್ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ 18 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 43 ರನ್ ಸಿಡಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಿಕಿ ಪ್ರಸಾದ್ 33 ಎಸೆತಗಳಲ್ಲಿ 35 ರನ್ ಬಾರಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಲ್ಸ್ ತಂಡವು ಕೊನೆಯ ಎಸೆತದಲ್ಲಿ 2 ರನ್ ಬಾರಿಸಿ 2 ವಿಕೆಟ್ಗಳ ರೋಚಕ ಜಯ ಸಾಧಿಸಿತು.
ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಣ ರೋಚಕ ಗೆಲುವು ದಾಖಲಿಸಿದ ದಾಖಲೆಯೊಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಯಿತು. ಅಂದರೆ WPL ನಲ್ಲಿ ಯಾವುದೇ ತಂಡ ಕೊನೆಯ ಎರಡು ವಿಕೆಟ್ ಉಳಿದಿರುವಾಗ ಗೆದ್ದ ಚರಿತ್ರೆ ಇರಲಿಲ್ಲ. ಆದರೆ ಈ ಬಾರಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು 2 ವಿಕೆಟ್ಗಳಿಂದ ಮಣಿಸಿ ಕ್ಯಾಪಿಟಲ್ಸ್ ಪಡೆ ಹೊಸ ಇತಿಹಾಸ ನಿರ್ಮಿಸಿದ್ದಾರೆ.