ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ WPL ಆರಂಭವಾಗಲಿದೆ. 2024ರ ಆವೃತ್ತಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮಹಿಳಾ ಪ್ರೀಮಿಯರ್ ಲೀಗ್ 3ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಶುಕ್ರವಾರ ಮುಖಾಮುಖಿಯಾಗಲಿವೆ.
ಡಾಲಿ ಧನಂಜಯ್ ಮದುವೆ ಮೈಸೂರಿನಲ್ಲೇ ಏಕೆ? ಇದಕ್ಕಿದೆ ಸ್ಟ್ರಾಂಗ್ ರೀಸನ್!
ರಾತ್ರಿ 7:30ಕ್ಕೆ ಗುಜರಾತ್ನ ವಡೋದರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಲಿದೆ. ಇದರೊಂದಿಗೆ ಭಾರತದ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳ ಪೋಷಣೆಗೆ ವೇದಿಗೆ ಸಜ್ಜುಗೊಂಡಿದೆ.
ಪ್ರತಿ ಡಬ್ಲ್ಯೂಪಿಎಲ್ ಋತುವಿನಲ್ಲಿ, ಉದಯೋನ್ಮುಖ ಭಾರತೀಯ ಆಟಗಾರ್ತಿಯರ ಪಟ್ಟಿ ಬೆಳೆಯುತ್ತಲೇ ಇದೆ. ಅಲಿಸ್ಸಾ ಹೀಲಿ, ಸೋಫಿ ಮೊಲಿನೆಕ್ಸ್ ಮತ್ತು ಕೇಟ್ ಕ್ರಾಸ್ ಅವರಂತಹ ವಿದೇಶಿ ತಾರೆಯರು ಗಾಯಗಳಿಂದಾಗಿ ಈ ಆವೃತ್ತಿಯಿಂದ ಹೊರಗುಳಿದಿರುವುದರಿಂದ, ಮುಂಬರುವ ಋತುವು ಅನುಭವಿ ದೇಶೀಯ ಆಟಗಾರ್ತಿಯರಿಗೆ ಮತ್ತು ಹೊಸ ಪ್ರತಿಭೆಗಳಿಗೆ ಮಿಂಚಲು ಸುವರ್ಣಾವಕಾಶ ಕಲ್ಪಿಸುತ್ತದೆ.
ಕಳೆದ ಬಾರಿಯ ಚಾಂಪಿಯನ್ ಆರ್ಸಿಬಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಕಠಿಣ ಸವಾಲನ್ನು ಎದುರಿಸುತ್ತಿದೆ. ಕಳೆದ ಋತುವಿನ ಪ್ರಮುಖ ಆಟಗಾರ್ತಿಯರಾದ ಆಲ್ರೌಂಡರ್ ಸೋಫಿ ಡಿವೈನ್, ಆರೋಗ್ಯಕ್ಕೆ ಆದ್ಯತೆ ನೀಡಲು ಕ್ರಿಕೆಟ್ನಿಂದ ವಿರಾಮ ತೆಗೆದುಕೊಂಡಿದ್ದಾರೆ. ಗಾಯಗೊಂಡಿರುವ ಸೋಫಿ ಮೊಲಿನೆಕ್ಸ್ ಮತ್ತು ಕೇಟ್ ಕ್ರಾಸ್ ಈ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಸ್ಟಾರ್ ಆಲ್ರೌಂಡರ್ ಎಲಿಸ್ ಪೆರ್ರಿ, ಶ್ರೇಯಂಕಾ ಪಾಟೀಲ್ ಮತ್ತು ಆಶಾ ಶೋಭನಾ ಕೂಡ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇದು ಸಹಜವಾಗಿ ಆರ್ಸಿಬಿ ತಂಡದ ಆತಂಕಕ್ಕೆ ಕಾರಣವಾಗಿದ್ದು, ಪ್ರಶಸ್ತಿ ಉಳಿಸಿಕೊಳ್ಳಲು ಯಶಸ್ವಿಯಾಗುವುದೇ ಎಂಬುದನ್ನು ಕಾದು ನೋಡಬೇಕಿದೆ.