ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸುಗೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ(47) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿರುವ ಮರಕ್ಕೆ ನಿನ್ನೆ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Weight Loss: ಬೇಗನೇ ತೂಕ ಕಳೆದುಕೊಳ್ಳಬೇಕೇ? ದಿನದ ಈ ಸಮಯದಲ್ಲಿ ಚಿಯಾ ಸೀಡ್ಸ್ ಸೇವಿಸಿ
ಬ್ಯಾಂಕ್ ಹಾಗೂ ಕೈಸಾಲ ಸೇರಿ 5 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದನು. ಅಧಿಕ ಮಳೆಯಿಂದ ಹತ್ತಿ ಬೆಳೆ ನಷ್ಟವಾಗಿತ್ತು. ಬೆಳೆ ಹಾನಿ ಹಾಗೂ ಸಾಲಬಾಧೆಯಿಂದ ನೊಂದಿದ್ದ ರೈತ ಬಸವರಾಜ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.