ಬಳ್ಳಾರಿ : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ನಲ್ಲಿ ಮತ್ತೊಂದು ಎಡವಟ್ಟು. ಸಂಭವಿಸಿದೆ. ವಿದ್ಯುತ್ ಇಲ್ಲದೇ ಮೊಬೈಲ್ ಟಾರ್ಚ್ ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದಂತ ಘಟನೆಯೂ ನಡೆದಿದೆ.
ಎಮರ್ಜೆನ್ಸಿ ವಾರ್ಡ್ ನಲ್ಲಿ ವಿದ್ಯುತ್ ಇಲ್ಲದೇ ಪರದಾಡುವಂತಾಗಿದ್ದು, ಮೊಬೈಲ್ ಟಾರ್ಚ್ ಹಾಕಿ ರೋಗಿಗಳನ್ನ ನೋಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅತ್ಯಾಧುನಿಕ ಸೌಲಭ್ಯವಿರೋ ಟ್ರಾಮಾ ಕೇರ್ ಸೆಂಟರ್ ನಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದ್ದು, ಆರೋಗ್ಯ ಸಚಿವಾಲಯವು ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಟ್ರಾಮಾ ಕೇರ್ ಸೆಂಟರ್ ಸೂಪರಿಡೆಂಡ್ ಗೆ ಸೂಚನೆ ನೀಡಿದೆ.