ಶಿವಮೊಗ್ಗ:– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆಗೆ ಸಿಎಂ ರಾಜೀನಾಮೆ ನೀಡಲಿ ಎಂದು ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ಬಾಂಗ್ಲಾ ವಿರುದ್ಧ T20 ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ; ಸ್ಟಾರ್ ಆಟಗಾರರೇ ಔಟ್!
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಹಗರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು ಹಾಗಾಗಿ ಸಿಎಂ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ ಎಂದರು.
ದೇಶದಲ್ಲಿ ಕಾನೊನು ಎಲ್ಲರಿಗೂ ಒಂದೇ. ಈಗಾಗಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದರು. ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಅಭಿವೃದ್ಧಿ ಬಗ್ಗೆ ಮಾತನಾಡಿದ ಸಂಸದರು, ಕಾರ್ಖಾನೆಗೆ ಕೇಂದ್ರ ಸಚಿವ ಕುಮಾರ ಸ್ವಾಮಿ ಭೇಟಿ ನೀಡಿದ್ದಾರೆ. ಇದನ್ನ ನಮ್ಮ ಕುಟುಂಬ ಆರಂಭಿಸಿತ್ತು. ಅದನ್ನ ಉಳಿಸುವ ಕೆಲಸ ಆಗಲಿದೆ. ವಿಐಎಸ್ಎಲ್ ಹೆಮ್ಮೆಯ ಸಂಸ್ಥೆಯಾಗಿದೆ. ಅದಕ್ಕೆ ನಮ್ಮ ಪ್ರೋತ್ಸಾಹವಿದೆ ಎಂದರು.
ದೇವಸ್ಥಾನದ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಇರಬಾರದು. ಚಾಮುಂಡೇಶ್ವರಿ ಪ್ರಾಧಿಕಾರ ರಚನೆ ಬೇಡ ಎಂದು ತಿಳಿಸಿದ್ದೇವು. ಈ ವಿಷಯ ನ್ಯಾಯಾಲಯದಲ್ಲಿದೆ ಮುಂದೇನಾಗಲಿದೆ ಕಾದು ನೋಡೋಣ ಎಂದರು.