ಮೈಸೂರು: ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಮೈಸೂರಿನ ಶಂಕರಮಠ ರಸ್ತೆಯಲ್ಲಿರುವ ಶ್ರೀಕಾಂತ ಶಾಲೆಯಲ್ಲಿ ವೋಟಿಂಗ್ ಮಾಡಿದ್ದಾರೆ. ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ಇದಕ್ಕೂ ಮುನ್ನ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಇನ್ನೂ ಪತ್ನಿ ತ್ರಿಶಿಕಾ, ತಾಯಿ ಪ್ರಮೋದಾ ದೇವಿ ಅವರಿಂದಲೂ ಮತದಾನ ಮತದಾನ ಮಾಡಲಾಯಿತು.
ರಾಜ್ಯಕ್ಕೆ “ರಾಗಾ” ಎಂಟ್ರಿ: ಗಣಿನಾಡಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ!
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹದಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಸಮಯ ಸಾಗುತ್ತಾ ತಾಪಮಾನ ಹೆಚ್ಚಳವಾಗುವ ಹಿನ್ನೆಲೆ ಬೆಳಗ್ಗೆಯಿಂದಲೇ ನಾಗರೀಕರು ಬಂದು ಮತ ಹಾಕುತ್ತಿರುವ ದೃಶ್ಯಗಳು ಕಂಡುಬಂದಿವೆ. ಇದುವರೆಗೂ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶೇ.9.21ರಷ್ಟು ಮತದಾನವಾಗಿದೆ.