ಹುಟ್ಟು ಹಬ್ಬದ ದಿನದಂದು ರಾತ್ರಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಅವಘಡದಲ್ಲಿ ಪ್ರಾಣ ಬಿಟ್ಟಿರುವ ಅಭಿಮಾನಿಗಳ ಮನೆಗೆ ಯಶ್ ತಂಡದವರು ಭೇಟಿ ಮಾಡಿ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಮೃತಪಟ್ಟವರಿಗೆ 5 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಯ ಪರಿಹಾರದ ಚೆಕ್ ಅನ್ನು ಇಂದು ವಿತರಿಸಿದ್ದಾರೆ.
ಒಂದು ಕಡೆ ಯಶ್ ಪರಿಹಾರವನ್ನು ನೀಡಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.
ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.