ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪದಚ್ಯುತಿಗೆ ಸಮರ ಸಾರಿರುವ
ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ಹಾರಿದ್ದಾರೆ. ನಿನ್ನೆ ಮಧ್ಯಾಹ್ನ ವಿಧಾನಸೌಧದ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಯತ್ನಾಳ್ ದೆಹಲಿಗೆ ತೆರಳಿದ್ದು ಭಾರಿ ಕುತೂಹಲ ಕೆರಳಿಸಿದೆ. ದೆಹಲಿಗೆ ಬರುವಂತೆ ಬೆಂಗಳೂರಿಗೆ ಬಂದಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ….
ʻಶಾʼಗೆ ಲಿಂಬಾಬಳಿ ದೂರು
ರಾಜ್ಯ ಬಿಜೆಪಿಯೊಳಗಿನ ಆಂತರಿಕ ಕಚ್ಚಾಟದ ಬಗ್ಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅಮಿತ್ ಶಾಗೆ ದೂರು ನೀಡಿದ್ದರು. ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ದೂರು ನೀಡಿದ್ರಂತೆ. ಅರವಿಂದ ಲಿಂಬಾವಳಿ ಅಮಿತ್ ಶಾ ಭೇಟಿ ಬೆನ್ನಲ್ಲೇ ರೆಬೆಲ್ ಯತ್ನಾಳ್ ದಿಲ್ಲಿಗೆ ಹಾರಿದ್ದು ಹೈಕಮಾಂಡ್ ಭೇಟಿಯಾಗ್ತಾರಾ ಅನ್ನೋ ಕುತೂಹಲ ಹೆಚ್ಚಿಸಿದೆ. ಹಾಗಾದ್ರೆ ಅಮಿತ್ ಶಾ ಬಸನಗೌಡ ಪಾಟೀಲ್ ಯತ್ನಾಳ್ ಜತೆ ಚರ್ಚೆ ಮಾಡ್ತಾರಾ, ಯತ್ನಾಳ್ ಆರೋಪಕ್ಕೆ ಹೈಕಮಾಂಡ್ ಮನ್ನಣೆ ನೀಡುತ್ತಾ.. ಮತ್ತೆ ಎಚ್ಚರಿಕೆ ಕೊಟ್ಟು ಕಳಿಸ್ತಾರಾ ಅನ್ನೋದು ಕುತೂಹಲ ಮೂಡಿಸಿದೆ..