ದಾವಣಗೆರೆ: ಯತ್ನಾಳ್ ಹುಚ್ಚು ನಾಯಿ ಇದ್ದಂತೆ ಎಂದು ಸ್ವಪಕ್ಷದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧವೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಸರ್ವಜ್ಞರ ವಚನ ಹೇಳುವ ಮೂಲಕ ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತೆ. ಅದಕ್ಕೆ ಆನೆಗೆ ಇರುವ ಗೌರವ ಕಡಿಮೆಯಾಗುತ್ತಾ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ.
ಜೆಡಿಎಸ್ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದು ಗರಂ ಆದರು. ವಿಜಯೇಂದ್ರ, ಯಡಿಯೂರಪ್ಪ ಅವರನ್ನು ಟೀಕೆ ಮಾಡಿದ್ರೆ, ಮೋದಿ ಮತ್ತು ಕೇಂದ್ರ ವರಿಷ್ಠರನ್ನು ಟೀಕೆ ಮಾಡಿದಂತೆ. ಯಡಿಯೂರಪ್ಪ ಆನೆ ಇದ್ದಂತೆ, ಅವರ ಬಗ್ಗೆ ಮಾತನಾಡುವವರು ಹುಚ್ಚು ನಾಯಿ. ಹುಚ್ಚು ನಾಯಿ ಬಗ್ಗೆ ಮಾತನಾಡುವುದು ಕೂಡ ವೇಸ್ಟ್. ಆ ಹುಚ್ಚು ನಾಯಿ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೇನೆ ಎಂದು ಟೀಕಾಪ್ರಹಾರ ನಡೆಸಿದರು.