ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿರೋಧ ಪಕ್ಷದ ನಾಯಕನನ್ನು ಬಿಎಸ್ ಯಡಿಯೂರಪ್ಪ ಬಣದ ನಾಯಕರಿಗೆ ನೀಡಿದ್ದು, ಯತ್ನಾಳ್ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಕೆಂಡಾಮಂಡಲರಾಗಿದ್ದಾರೆ. ಇನ್ನು ಯತ್ನಾಳ್ ಅಸಮಾಧಾನದ ಬಗ್ಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಯತ್ನಾಳ್ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗುತ್ತಿದೆ. ಅವರ ಅಭಿಪ್ರಾಯವನ್ನ ಹೇಳಲು ಸ್ವತಂತ್ರರಿದ್ದಾರೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಅವರವರ ಅಭಿಪ್ರಾಯಗಳು ಇರುತ್ತೆ. ಎಲ್ಲರ ಅಭಿಪ್ರಾಯದ ಮೇರೆಗೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ಯತ್ನಾಳ್ಗೆ ಟಾಂಗ್ ಕೊಟ್ಟರು.
ಯತ್ನಾಳ್ ಜೀ ಕೆಲವು ನೋವಿನಿಂದ ಹೇಳಿದ್ದಾರೆ. ಕೆಲವು ಸಮಸ್ಯೆಗಳನ್ನ ಹೇಳಿಕೊಂಡಿರಬಹುದು. ಎಲ್ಲವನ್ನು ಹಿರಿಯರು ಕುಳಿತು ಸಮಾಲೋಚನೆ ಮಾಡಿ ಉತ್ತರ ಕಂಡುಕೊಳ್ಳುತ್ತೇವೆ ಎಂದು ಹೇಳಿದರು.
ಇನ್ನು ಇದೇ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಅಸಮರ್ಥರೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾರ ಸಾಮರ್ಥ್ಯ ಏನು ಎಂದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ. ಅದನ್ನ ಆಡಳಿತ ಪಕ್ಷದವರು, ಬೇರೆ ಯಾರು ತೀರ್ಮಾನ ಮಾಡಲ್ಲ ಎಂದು ಹೇಳಿದ ವಿಜಯೇಂದ್ರ, ಎಲ್ಲರೈ ಸರಿಹೋಗಿದ್ದಾರೆ, ಸರಿಹೋಗುತ್ತಾರೆ ಎಂದರು.