ಬೆಳಗಾವಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) , ವಿಧಾನಸಭೆ ಚುನಾವಣೆಗೆ ಎನಾಗಿದೆ ಎಲ್ಲರಿಗೂ ಗೊತ್ತು. ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದರೆ ಇದೇ ಗತಿ ಆಗುವುದು. ವಿಜಯಪುರದಲ್ಲಿ ನನ್ನ ಚುನಾವಣೆ ಅಷ್ಟು ಸುಲಭ ಇರಲಿಲ್ಲ.
ನನ್ನನ್ನ ಸೋಲಿಸಲು ಬಂದುವರು ಸೋತರು ಅಂತಾ ಪರೋಕ್ಷವಾಗಿ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದು ಧ್ವನಿಯನ್ನ ಕುಗ್ಗಿಸುವ ಹುನ್ನಾರ ರಾಜ್ಯದಲ್ಲಿ ನಡೆಯುತ್ತಿದೆ. ಸಿಟಿ ರವಿಯವರನ್ನ ಸೋಲಿಸಿದರು, ಸಂತೋಷ್ ಅವರ ಬಗ್ಗೆ ಅಪಪ್ರಚಾರ ಮಾಡಿದರು. ದೇಶ ಉಳಿಯಬೇಕು, ಹಿಂದುಗಳು ಸುರಕ್ಷಿತವಾಗಿ ಇರಬೇಕು ಅಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28ಸ್ಥಾನ ಗೆಲ್ಲಬೇಕು ಎಂದರು.

