ಬೆಂಗಳೂರು: ಬಸವಣ್ಣನವರ ಹೆಸರನ್ನು ಯತ್ನಾಳ್ ದ್ವೇಷ ಭಾಷಣಕ್ಕೆ ಬಳಸಿದ್ದು ಘೋರ ಅಪರಾಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಯತ್ನಾಳ್ ಹೇಳಿಕೆ ಖಂಡಿಸಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ.
ಬಸವಣ್ಣನವರ ಹಾಗೆ ಹೊಳೆ ಹಾರಬೇಕು ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ. ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ ಎಂದು ಖರ್ಗೆ ಹೇಳಿದ್ದಾರೆ.
ಪುರುಷರೇ ಗಮನಿಸಿ.. ಚಳಿಗಾಲದಲ್ಲಿ ಬಿಸಿನೀರಿನಲ್ಲಿ ಸ್ನಾನ ಮಾಡೋದ್ರಿಂದ ವೀರ್ಯದ ಸಂಖ್ಯೆ ಕಡಿಮೆಯಾಗುತ್ತೆ..!?
ಬಸವಣ್ಣನವರು ಹೊಳೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ, ಯತ್ನಾಳ್ ಅವರೇ, ನಿಮ್ಮ ಪ್ರಕಾರ ಬಸವಣ್ಣನವರು ಹೊಳೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.