ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಗೆ ವಾರೆಂಟ್ ಜಾರಿಯಾಗಿದೆ. 1 ನೇ ತ್ವರಿತಗತಿ ನ್ಯಾಯಾಲಯದಿಂದ ಈ ಆದೇಶ ಜಾರಿಯಾಗಿದ್ದು, ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಗೆ ಸಂಕಷ್ಟ ಶುರುವಾಗಿದೆ.
ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಬಿಎಸ್ವೈ ವಿರುದ್ಧ ಸಂತ್ರಸ್ತೆಯ ತಾಯಿ ದೂರು ನೀಡಿದ್ದು, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.
ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!
ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿ ಪ್ರಕರಣದ ದಾಖಲಾಗಿ ಮೂರು ತಿಂಗಳಾದರೂ ಯಾವುದೇ ಬೆಳವಣಿಗೆ ನಡೆದಿಲ್ಲ. ಇಷ್ಟು ದಿನವಾದರೂ ಯಡಿಯೂರಪ್ಪ ಅವರನ್ನು ಬಂಧಿಸಿಲ್ಲ ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.