ಶಿವಮೊಗ್ಗ: ಬಿಎಸ್ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಎಲ್ಲವೂ ಸರಿಯಾಗುತ್ತದೆ, ಎಲ್ಲವನ್ನು ಸರಿಪಡಿಸುವ ಕೆಲಸ ವರಿಷ್ಠರು ಮಾಡುತ್ತಾರೆ. ಬಿಎಸ್ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ. ಸೈಕಲ್ನಲ್ಲಿ ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಕಟ್ಟಿದ ಫಲವಾಗಿ ರಾಜ್ಯದಲ್ಲಿ ಇಂದು ಪಕ್ಷ ಬಲಿಷ್ಠವಾಗಿದೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಪರೋಕ್ಷವಾಗಿ ಕೆಎಸ್ ಈಶ್ವರಪ್ಪಗೆ ಟಾಂಗ್ ಕೊಟ್ಟರು.
Loksabha Elections: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ..? ಸೇರಿಸೋದು ಹೇಗೆ..? ಇಲ್ಲಿದೆ ನೋಡಿ ವಿವರ
ಬಿಎಸ್ ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಲೋಕಸಭೆ ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ. ಎಲ್ಲವನ್ನೂ ಎದುರಿಸುವ ಧಮ್ ಮತ್ತು ತಾಕತ್ತು ನಮ್ಮ ಕಾರ್ಯಕರ್ತರಿಗೆ ಇದೆ. ಸಾಮೂಹಿಕವಾಗಿ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಗೆಲ್ಲುವ ಪಕ್ಷಕ್ಕೆ ಸಮಸ್ಯೆ ಬಹಳ. ಕಾಂಗ್ರೆಸ್ಗೆ ಸಮಸ್ಯೆ ಯಾಕೆ ಇಲ್ಲ ಅಂದರೇ ಅಲ್ಲಿ ಹೋದರೆ ಠೇವಣಿ ಸಿಗುವುದಿಲ್ಲ ಎನ್ನುವುದು ಗೊತ್ತಿದೆ ಅದಕ್ಕೆ ಸಮಸ್ಯೆ ಇಲ್ಲ ಎಂದು ವ್ಯಂಗ್ಯವಾಡಿದರು.