ಬೆಂಗಳೂರು: ವಿಜಯೇಂದ್ರ ವಿರುದ್ಧ ಹೊಂದಾಣಿಕೆ ದಾಖಲೆ ಕುರಿತು ಯತ್ನಾಳ್ ಹೇಳಿಕೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ಕ್ಷಣವೂ ತಡಮಾಡದೇ ಮಾನ್ಯ ಯತ್ನಾಳ್ ಅವರು ಬಿಡುಗಡೆ ಮಾಡಲಿ. ಶುಭ ಮುಹೂರ್ತ ಕಾಯದೆ ವೀಡಿಯೋ ದಾಖಲೆ ಇದ್ದರೆ ತತಕ್ಷಣ ಬಿಡುಗಡೆ ಮಾಡಿ., ಹೊಂದಾಣಿಕೆ ನನಗೆ ಅವಶ್ಯಕತೆ ಇಲ್ಲ, ಆದರೆ ಹೊಂದಾಣಿಕೆ ರಾಜಕಾರಣ ಅಂತಾ ಪಕ್ಷ ಸಂಘಟನೆಗೆ ಪೆಟ್ಟು ಕೊಡ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲಿ ಒಳ್ಳೆಯದು ಆಗಲ್ಲ. ಆದರೆ ಕಾರ್ಯಕರ್ತರ ಅಪೇಕ್ಷೆ ಇದೆ,̤ ಬಿಗಿ ಕ್ರಮ ಆಗಬೇಕು ಎಂದು ಇದರ ಬಗ್ಗೆ ವರಿಷ್ಠರು ತೀರ್ಮಾನ ಮಾಡ್ತಾರೆ ವಿಜಯೇಂದ್ರ ಬದಲಾವಣೆ ಮಾಡೋಕೆ ಅವರ ಜೊತೆ ಇನ್ನೂ ಹತ್ತು ಜನರನ್ನು ಸೇರಿಸಿಕೊಳ್ಳಲಿ ನನಗೇನು ತೊಂದರೆ ಇಲ್ಲ ಇವಾಗ್ಲೂ ಮನವಿ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರಿಗೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಳ್ಳಬಾರದು. ನಮ್ಮ ನಡವಳಿಕೆ ಸಂಘಟನೆ ಗೆ ಪೂರಕವಾಗಿ ಇರಬೇಕು. ಅದು ಬಿಟ್ಟು ತೊಂದರೆ ಕೊಡುವ ಕೆಲಸ ಮಾಡಬಾರದು ಎಂದರು.
ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಯಶಸ್ಸು ಸಿಗಲಿದೆ – ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭರವಸೆ
ಇನ್ನೂ ಇದೇ ವೇಳೆ ರಾಜ್ಯದಲ್ಲಿ ಸಂಘಟನಾ ಪರ್ವ ನಡೀತಿದೆ. ಪಕ್ಷದ ವರಿಷ್ಠರ ಭೇಟಿ ಮಾಡಿ ಮೂರು ಕ್ಷೇತ್ರಗಳ ಹಿನ್ನಡೆ ಬಗ್ಗೆ ಚರ್ಚೆ ಮಾಡಿದ್ಸೇನೆ. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆಯೂ ತಿಳಿಸಿದ್ದೇನೆ. ಆದರೆ ಯಾರ ವಿರುದ್ದವೂ ಚಾಡಿ ಹೇಳೋದು, ಅವರನ್ನು ಉಚ್ಚಾಟನೆ ಮಾಡಿಸೋ ಬಗ್ಗೆ ಹೇಳಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ. ಆದರೆ ಕಾರ್ಯಕರ್ತರ ಅಭಿಪ್ರಾಯ ಇದೆ. ಕೆಲವರು ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಪ್ರತ್ಯೇಕವಾಗಿ ಹೋಗ್ತಿದ್ದಾರೆ. ಕೆಲವರು ಯತ್ನಾಳ್ ಹೆಗಲ ಮೇಲೆ ಗನ್ ಇಟ್ಟುಕೊಂಡು ಕೆಲವರು ಗುಂಡು ಹಾರಿಸುವ ಕೆಲಸ ಮಾಡ್ತಿದ್ದಾರೆ. ಆದರೆ ಅವರ ಏನೇ ಉದ್ದೇಶ ಸಫಲ ಆಗಲ್ಲ. ಯಡಿಯೂರಪ್ಪ ಮತ್ತೆ ವಿಜಯೇಂದ್ರಗೆ ಬೈಯ್ಯೋದೆ ಒಂದು ಪದವಿ ಅಂದ್ಕೊಂಡಿದ್ದಾರೆ. ಇವತ್ತು ಮಾಜಿ ಶಾಸಕರು ಇದರ ಬಗ್ಗೆ ಹೇಳಿದ್ದಾರೆ. ನಾನು ಅವರಿಗೆ ಇದನ್ನು ಬದಿಗೊತ್ತಿ ಪಕ್ಷ ಸಂಘಟನೆ ಮಾಡಿ ಅಂತಷ್ಟೇ ಹೇಳಿದ್ದೇನೆ ಎಂದರು.