ಬೆಂಗಳೂರು: ಯಲಹಂಕ – ರಾಜಾನುಕುಂಟೆ ಸಬ್ ಅರ್ಬನ್ ರೈಲು ಕಾಮಗಾರಿ ಶೀಘ್ರವೇ ಆರಂಭಗೊಳ್ಳಲಿದೆ ಎಂದು ಹೇಳಲಾಗಿದೆ. ಸುಮಾರು 46 ಕಿಲೋಮೀಟರ್ ಮಾರ್ಗದಲ್ಲಿ ಸಬ್ ಅರ್ಬನ್ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ದ್ವಿ ಪಥ ಹಳಿ ಜೋಡಣೆ, ವಿದ್ಯುತ್ ಕಂಬಗಳ ತೆರವು, ಒಳಚರಂಡಿ ವ್ಯವಸ್ಥೆ ಬಗ್ಗೆ ಸರ್ವೇ ಕಾರ್ಯ ಪೂರ್ಣಗೊಳಿಸಿದ್ದು, 3 ತಿಂಗಳಲ್ಲಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೆ- ರೈಡ್‌ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
