ಬೆಂಗಳೂರು: ದೇವೇಗೌಡ್ರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಸಿಪಿವೈ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡ್ತಿಲ್ಲ, ಅವರ ವಯಸ್ಸು 92, ದೇಶ, ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಅಂತ ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ. ಹಾಗಾಗಿ ಇಲ್ಲಿ ಅಧಿಕಾರದ ದಾಹಕ್ಕೆ, ಅಧಿಕಾರಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇನ್ನೂ ಯಾವುದೇ ಕಾರ್ಯಕರ್ತ ನಿಂತರೂ ಬರುತ್ತಿದ್ದ ನಮ್ಮ ಸಾಂಪ್ರದಾಯಿಕ ಕನಿಷ್ಠ 60 ಸಾವಿರ ಮತಗಳು ಈಗ 87 ಸಾವಿರಕ್ಕೆ ಹೋಗಿ ಮುಟ್ಟಿದೆ. ಪಕ್ಷದ ಅಭಿಮಾನಿಗಳಾಗಿರುವ ಜನ ಯಾರೂ ನಮ್ಮ ಕೈಬಿಟ್ಟಿಲ್ಲ. ಆದ್ರೆ 1 ಸಮುದಾಯದ ಪರವಾಗಿ ದೇವೇಗೌಡರು ಹಿಂದೆ ನಿರ್ಣಯ ಕೈಗೊಂಡಿದ್ದರು, ಮೀಸಲಾತಿ ವಿಚಾರದ ಬಗ್ಗೆಯೂ ತೀರ್ಮಾನ ಮಾಡಿದ್ರು.
ರೈತರೇ ಗಮನಿಸಿ.. “ಗಂಗಾ ಕಲ್ಯಾಣ ಯೋಜನೆ”ಯಡಿ ಉಚಿತ ಬೋರ್ವೆಲ್ ಕೊರೆಸುವಿಕೆಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಹಾಯಧನ!
ಈ ಚುನಾವಣೆಯಲ್ಲೂ ಆ ಸಮುದಾಯವನ್ನ ಕಡೆಗಣಿಸಬಾರದು, ಅವರನ್ನೂ ವಿಶ್ವಾಸಕ್ಕೆ ತಗೊಂಡು ಹೋಗಬೇಕು ಅಂತ ಪ್ರಯತ್ನ ಮಾಡಿದ್ವಿ. ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅಂತ ಆ ಸಮುದಾಯ ನಿನ್ನೆ ಸ್ಪಷ್ಟ ಸಂದೇಶ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಬೇರೆ ಸಮುದಾಯಗಳನ್ನು ಯಾವ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೋ ಅದನ್ನು ಮಾಡ್ತೇವೆ ಎಂದು ನುಡಿದರು.