ನವದೆಹಲಿ:- ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡ್ಬೇಡಿ ಎಂದು ಹೇಳುವ ಮೂಲಕ ರಾಹುಲ್ಗೆ ಬಿಜೆಪಿ ತಿರುಗೇಟು ಕೊಟ್ಟಿದೆ.
ಈ ಸಂಬಂಧ ಬಿಜೆಪಿ ಸಂಸದ ಸಂಬಿತ್ ಪಾತ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ನಾಚಿಗೇಡು ಮತ್ತು ದುರದೃಷ್ಟಕರ ಸಂಗತಿ, ಕೀಳುಮಟ್ಟದ ರಾಜಕೀಯ ಎಂದು ಕಿಡಿ ಕಾರಿದರು.
ದೇಶದ ಶ್ರೇಷ್ಠ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರ ಸಾವಿನಲ್ಲಿ ಘನತೆ ಮೆರೆಬೇಕು. ಆದ್ರೆ ರಾಹುಲ್ ಅವರ ಹೇಳಿಕೆ ನಾಡಿಗೇಡಿನ ಸಂಗತಿಯಾಗಿದೆ. ಕಾಂಗ್ರೆಸ್ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿತ್ತು. ಅದಕ್ಕೆ ಸರ್ಕಾರ ಒಪ್ಪಿದೆ, ಸಿಂಗ್ರ ಗೌರವಾರ್ಥವಾಗಿ ಸ್ಮಾರಕ ನಿರ್ಮಿಸುವ ಉದ್ದೇಶವನ್ನು ವ್ಯಕ್ತಪಡಿಸಿದೆ. ಸ್ಮಾರಕ ಮಾಡುವುದರಿಂದ ಇಡೀ ಜಗತ್ತು ಅವರ ಸಕಾರಾತ್ಮ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.
ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಕೆಲವು ಕಾರ್ಯವಿಧಾನವಿದೆ. ಆದ್ರೆ ಅಂತ್ಯಕ್ರಿಯು ಕಾಯಲು ಸಾಧ್ಯವಿಲ್ಲದ ಪ್ರಕ್ರಿಯೆಯಾಗಿದೆ. ಆದ್ದರಿಂದಲೇ ಬೋಧ್ ಘಾಟ್ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದರು.