ಬೆಂಗಳೂರು:- ಅರೆ ವೈದ್ಯಕೀಯ ಕೋರ್ಸ್ ಮುಗಿಸಿ ಕ್ಲಿನಿಕ್ ತೆರೆಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಕ್ಲಿನಿಕ್ ನಡೆಸಲು ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಕೋಲಾರ ಜಿಲ್ಲೆಯ ಕೆಜಿಎಫ್ ಮೂಲದ ಅಣ್ಣಯ್ಯ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಸಮುದಾಯ ವೈದ್ಯಕೀಯ ಸೇವೆ ಮತ್ತು ಅಗತ್ಯ ಔಷಧಗಳು ಎಂಬ ವಿಷಯದಲ್ಲಿ ಡಿಪ್ಲೋಮ ಪಡೆದವರನ್ನು ವೈದ್ಯರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಅರ್ಜಿದಾರರ ವಿದ್ಯಾಭ್ಯಾಸಕ್ಕೆ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್ಮೆಂಟ್ (ಕೆಪಿಎಂಎ) ಕಾಯ್ದೆ ಸೆಕ್ಷನ್ 2(ಕೆ) ಅನ್ವಯವಾಗುವುದಿಲ್ಲ. ಆದ ಕಾರಣ ಅವರನ್ನು ವೈದ್ಯರೆಂದು ಪರಿಗಣಿಸಲು ಹಾಗೂ ಖಾಸಗಿಯಾಗಿ ವೈದ್ಯಕೀಯ ಸೇವೆ ಮುಂದುವರಿಸಲು ಅನುಮತಿಸಲಾಗದು ಆದೇಶದಲ್ಲಿ ತಿಳಿಸಿದೆ.