ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನು ಬಂಡುಕೋರ ನಾಯಕ ಎಂದು ವ್ಯಂಗ್ಯವಾಡಿದ್ದಾರೆ.
Loksabha Election: ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ತಯಾರಿ: ಕರ್ನಾಟಕಕ್ಕೆ ರಾಹುಲ್ ಗಾಂಧಿ ಕರೆಸಲು ಪ್ಲ್ಯಾನ್!?
ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರುವ ಅವರು, ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘ವೀಕ್ ಪಿಎಂ’ ಎಂದು ಜರಿದಿದ್ದಾರೆ.
ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲೇ ಇದ್ದರು. ಆದ್ರೂ ನಿಮಗೆ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ ಎಂದು ಕುಟುಕಿದ್ದಾರೆ.