ಬೆಂಗಳೂರು: ವ್ಯಕ್ತಿಯೊಬ್ಬ ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ.
ಬಿಹಾರ ಮೂಲದ ಅನಿಲ್ ಕುಮಾರ್ ಪಾಂಡೆ(49) ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೆಟ್ರೋ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ ವ್ಯಕ್ತಿ ಎರಡು ಹಳಿಗಳ ಮಧ್ಯೆ ಮಲಗಿದ್ದಾನೆ.
IT ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 40,000 ಫ್ರೆಶರ್ʼಗಳ ನೇಮಕದ ಚಿಂತನೆಯಲ್ಲಿದೆ TCS
ಕೂಡಲೇ, ಲೋಕೋ ಪೈಲಟ್ ಮೆಟ್ರೋ ನಿಲ್ಲಿಸಿದ್ದರಿಂದ ವ್ಯಕ್ತಿ ಬಚಾವ್ ಆಗಿದ್ದಾನೆ. ಬಿಎಂಆರ್ಸಿಎಲ್ ಮೆಟ್ರೋ ಸಂಚಾರ ಸ್ಥಗಿತಗೊಳಿಸಿದ್ದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಹೈಡ್ರಾಮಾದಿಂದ ಮೆಟ್ರೋ ಸಂಚಾರ ಬಂದ್ ಮಾಡಲಾಗಿದೆ.