ಕೊಪ್ಪಳ:- ಅಂಜನಾದ್ರಿ ಬೆಟ್ಟ ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.
ಜಯೇಶ ಯಾದವ್ (17) ಮೃತ ಯುವಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಾಲಿಬಾಲ್ ತರಬೇತುದಾರ ಸುರೇಶ ಯಾದವ್ ಅವರ ಪುತ್ರ ಎಂದು ತಿಳಿಯಲಾಗಿದೆ.
ಅಂಜನಾದ್ರಿ ಬೆಟ್ಟದ ಆಂಜನೇಯನ ದರ್ಶನ ಪಡೆಯಲು ಯುವಕನೊಬ್ಬ ಸ್ನೇಹಿತರೊಂದಿಗೆ ತೆರಳಿದ್ದ. ಇನ್ನೇನು ಬೆಟ್ಟ ಹತ್ತುವುದು ಮುಗಿದಿದೆ ಎಂದು ಬೆಟ್ಟದ ಅಂತ್ಯ ಭಾಗಕ್ಕೆ ಹೋಗಿದ್ದಾನೆ. ಈ ವೇಳೆ ಏಕಾಏಕಿ ಸುಸ್ತು ಕಾಣಿಸಿಕೊಂಡು, ಅಸ್ವಸ್ಥನಾಗಿದ್ದ. ಕೂಡಲೇ ಅಂಬುಲೆನ್ಸ್ಗೆ ಕರೆ ಮಾಡಿದ್ದು, ಗಂಗಾವತಿ ವಾಹನ ಸಿಬ್ಬಂದಿ ಅಂಬುಲೆನ್ಸ್ನಲ್ಲಿ ಆಕ್ಸಿಜನ್ ಕೊರತೆಯಿದೆ ಎಂದು ತಿಳಿಸಿದ್ದಾನೆ.
ನಂತರ ಅಂಜನಾದ್ರಿ ದೇವಸ್ಥಾನದ ಸಿಬ್ಬಂದಿ ಆನೆಗುಂದಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಅಂಬುಲೆನ್ಸ್ಗೆ ಕರೆ ಮಾಡಿ, ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಅಲ್ಲಿನ ಸಿಬ್ಬಂದಿ ಯುವಕನನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸ್ಸು ಮಾಡಿದ್ದಾರೆ.