ಬೆಂಗಳೂರು:- ಕರ್ನಾಟಕದ ಯುವಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಬೆಂಗಳೂರಿನಲ್ಲಿ ಐಕ್ಯಾಟ್ 3ನೇ ಕೇಂದ್ರ ಸ್ಥಾಪನೆ ಆಗಲಿದೆ.
ಈ ಬಗ್ಗೆ HD ಕುಮಾರಸ್ವಾಮಿ ಮಾತನಾಡಿದ್ದು, ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ-ಐಕ್ಯಾಟ್ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದರು.
ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಆಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಶುರುಮಾಡುವುದಾಗಿ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಐಕ್ಯಾಟ್ ಸ್ಥಾಪನೆ ಮಾಡುವುದರಿಂದ ಎಲೆಕ್ಟ್ರಿಕ್ ವಾಹನ ತಂತ್ರಜ್ಞಾನ, ಸಾಫ್ಟ್ವೇರ್ ನಿಯಂತ್ರಿತ ವಾಹನಗಳು, ಸ್ವಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯ ದೃಷ್ಟಿಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಬೆಂಗಳೂರಿನಲ್ಲಿ ಐಕ್ಯಾಟ್ ಕೇಂ…