ಬೆಂಗಳೂರು:- ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ‘ಯುವನಿಧಿ’ ಸಹ ಒಂದು. ವಿದ್ಯಾವಂತ ಯುವಕ/ ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಜೊತೆಗೆ ಕೌಶಲ್ಯಾಭಿವೃದ್ಧಿಗೊಳಿಸಿ, ಉದ್ಯೋಗಕ್ಕೆ ಸಜ್ಜುಗೊಳಿಸಲು ಆದ್ಯತೆ ನೀಡುವ ಯೋಜನೆ ಇದಾಗಿದೆ. 2024ರ ಜನವರಿ 12ರಂದು ಈ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಕೆಲವೇ ದಿನಗಳಲ್ಲಿ ಯೋಜನೆಗೆ ಚಾಲನೆ ಸಿಕ್ಕಿ 1 ವರ್ಷ ಆಗಲಿದೆ.
ಜಾತಿ ಗಣತಿ ವರದಿ ಜಾರಿಗೆ ಫಿಕ್ಸ್ ಆಯ್ತಾ ಮುಹೂರ್ತ? CM ಸಿದ್ದರಾಮಯ್ಯ ಹೇಳಿದ್ದೇನು?
ಯುವನಿಧಿ ಯೋಜನೆ ಅಡಿಯಲ್ಲಿ 2023–24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳನ್ನು ಯುವ ನಿಧಿ ಯೋಜನೆ ವ್ಯಾಪ್ತಿಗೆ ತರುವ ಸಂಬಂಧ ಜನವರಿ 6 ರಿಂದ 20 ರವರೆಗೆ ಜಿಲ್ಲೆಯಾದ್ಯಂತ ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಅಭ್ಯರ್ಥಿಗಳು ಮೇಲೆ ತಿಳಿಸಿದ ನೋಂದಣಿ ಕೇಂದ್ರಗಳಲ್ಲಿ ಅಥವಾ www.sevasindhugs.karnataka.gov.in ನೋಂದಾಯಿಸಬಹುದಾಗಿದೆ. 2024ನೇ ಸಾಲಿನ ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾದಲ್ಲಿ ತೆರ್ಗಡೆ ಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 01 ರಿಂದ 25ನೇ ತಾರೀಕಿನೊಳಗೆ ಘೋಷಣೆಯನ್ನು ಆನ್ಲೈನ್ ಮೂಲಕ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.