ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಕರ್ತವ್ಯ ಕ್ಕೆ ಅಡ್ಡಿ ಮತ್ತು ಹಣಕ್ಕೆ ಬೇಡಿಕೆ, ಬೆದರಿಕೆ ಆರೋಪದಲ್ಲಿ ಯೂಟ್ಯೂಬರ್ʼನನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಶಬಾಜ್ ಖಾನ್ ಬಂಧಿತ ಆರೋಪಿಯಾಗಿದ್ದು, ಉಪ ಔಷಧ ನಿಯಂತ್ರಣ ಅಧಿಕಾರಿ ಕಚೇರಿ ನುಗ್ಗಿ ದಾಂಧಲೇ ನಡೆಸಿದ್ದ ಹಿನ್ನೆಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Crow In Dream: ಕನಸಿನಲ್ಲಿ ಕಾಗೆ ಬಂದ್ರೆ ಶುಭವೋ ಅಶುಭವೋ..? ಇಲ್ಲಿದೆ ನೋಡಿ ಮಾಹಿತಿ
ಸದ್ಯ ಆರೋಪಿ ಯನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಫಾರ್ಮಸಿ ಗಳಿಗೂ ಇದೇ ಅನಧಿಕೃತವಾಗಿ ನುಗ್ಗಿ ಬೆದರಿಕೆ ಹಾಕಿ, ಹಣಕ್ಕೆ ಬೇಡಿಕೆ ಇಟ್ಟಿರೋದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.