ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ನಡೆಯಲಿರುವ ಟೂರ್ನಿಯಲ್ಲಿ ಭಾರತ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಜೂನ್ 5ರಂದು ಐರ್ಲೆಂಡ್ ಎದುರು ಸ್ಪರ್ಧಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಈ ಬಗ್ಗೆ ಇತ್ತೀಚಿನ ಸಂದರ್ಶನದಲ್ಲಿ ಮಾತನಾಡಿರುವ ಯುವರಾಜ್ ಸಿಂಗ್ ಟೀಮ್ ಇಂಡಿಯಾ ತನ್ನ ಆಡುವ 11ರ ಬಳಗದಲ್ಲಿ ಆಯ್ಕೆ ಮಾಡಿಕೊಳ್ಳಬೇಕಾದ ವಿಕೆಟ್ಕೀಪರ್ ಬ್ಯಾಟ್ಸ್ಮನ್ನ ಹೆಸರಿಸಿದ್ದಾರೆ.
Aadhar Card ಬಳಕೆದಾರರಿಗೆ ಎಚ್ಚರಿಕೆ ನೀಡಿದ UIDAI.! ʻಆಧಾರ್ʼ ದುರ್ಬಳಕೆ ಮಾಡಿದ್ರೆ ಕಾದಿದೆ ಕಠಿಣ ಶಿಕ್ಷೆ
2013ರ ಬಳಿಕ ಐಸಿಸಿ ಟೂರ್ನಿಗಳಲ್ಲಿ ಟ್ರೋಫಿ ಗೆಲುವಿನ ಬರ ಎದುರಿಸಿರುವ ಟೀಮ್ ಇಂಡಿಯಾ, ಮುಂಬರುವ ಟಿ20 ವಿಶ್ವಕಪ್ನಲ್ಲಿ ತನ್ನ ಆಡುವ 11ರ ಬಳಗದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ರಿಷಭ್ ಪಂತ್ ಅವರನ್ನೇ ಆಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಅಂದಹಾಗೆ ಐಪಿಎಲ್ 2024 ಟೂರ್ನಿಯಲ್ಲಿ ರಿಷಭ್ ಪಂತ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇ ಆಫ್ಸ್ಗೆ ಅರ್ಹತೆ ಪಡೆಯಲಿಲ್ಲ.
ಮತ್ತೊಂದೆಡೆ ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯ 3ನೇ ಸ್ಥಾನದೊಂದಿಗೆ ಪ್ಲೇ ಆಫ್ಸ್ ತಲುಪಿ. ಇದೀಗ ಆರ್ಸಿಬಿ ವಿರುದ್ಧದ ಎಲಿಮಿನೇಟರ್ ಪಂದ್ಯ ಗೆದ್ದು ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಸಂಜು ಸ್ಯಾಮ್ಸನ್ ಮುಂಚೂಣಿಯಲ್ಲಿ ನಿಂತು ತಂಡವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸಿದ್ದಾರೆ. 52.10ರ ಸರಾಸರಿಯಲ್ಲಿ ಒಟ್ಟಾರೆ 521 ರನ್ ಬಾರಿಸಿ 155.52ರ ಅಮೋಘ ಸ್ಟ್ರೈಕ್ರೇಟ್ ಕಾಯ್ದುಕೊಂಡು ಸೆಲೆಕ್ಟರ್ಸ್ ಗಮನ ಸೆಳೆದಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಬೆಸ್ಟ್ ಪ್ಲೇಯಿಂಗ್ 11
- ರೋಹಿತ್ ಶರ್ಮಾ (ನಾಯಕ/ ಓಪನರ್)
ಯಶಸ್ವಿ ಜೈಸ್ವಾಲ್ (ಓಪನರ್)
03. ವಿರಾಟ್ ಕೊಹ್ಲಿ (ಬ್ಯಾಟರ್)
04. ಸೂರ್ಯಕುಮಾರ್ ಯಾದವ್ (ಬ್ಯಾಟರ್)
05. ಶಿವಂ ದುಬೇ (ಆಲ್ರೌಂಡರ್)
06. ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್ ಬ್ಯಾಟ್ಸ್ಮನ್)
07. ರವೀಂದ್ರ ಜಡೇಜಾ (ಆಲ್ರೌಂಡರ್)
08. ಕುಲ್ದೀಪ್ ಯಾದವ್ (ಚೈನಾಮನ್ ಸ್ಪಿನ್ನರ್)
09. ಅರ್ಷದೀಪ್ ಸಿಂಗ್ (ಎಡಗೈ ವೇಗಿ)
10. ಜಸ್ಪ್ರೀತ್ ಬುಮ್ರಾ (ಫಾಸ್ಟ್ ಬೌಲರ್)
11. ಮೊಹಮ್ಮದ್ ಸಿರಾಜ್ (ಫಾಸ್ಟ್ ಬೌಲರ್)
ಭಾರತದ ಟಿ20 ವಿಶ್ವಕಪ್ ತಂಡ ಹೀಗಿದೆ
ರೋಹಿತ್ ಶರ್ಮಾ (ಕ್ಯಾಪ್ಟನ್), ಹಾರ್ದಿಕ್ ಪಾಂಡ್ಯ (ವೈಸ್ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಶಿವಂ ದುಬೇ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್ , ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.