ಶಿವಮೊಗ್ಗ:– ಜಮೀರ್ ಅಹಮದ್ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆ ಎಸ್ ಈಶ್ವರಪ್ಪ ಒತ್ತಾಯ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತೆಲಂಗಾಣ ಚುನಾವಣೆ ಪ್ರಚಾರದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿರುವ ಸಚಿವ ಜಮೀರ್ ಅಹಮದ್ ಖಾನ್ರನ್ನು ತಕ್ಷಣ ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದರು
ಕಾಂಗ್ರೆಸ್ ಸರ್ಕಾರ ಭಾರತದ ಸಂವಿಧಾನದ ಪ್ರಕಾರ ನಡೆಯುತ್ತಿದೆಯೋ ಅಥವಾ ಪಾಕಿಸ್ತಾನದ ಸಂವಿಧಾನದ ಪ್ರಕಾರ ಆಡಳಿತ ನಡೆಸುತ್ತಿದೆಯೋ ಎಂಬ ಬಗ್ಗೆ ಸ್ಪಷ್ಟಪಡಿಸಬೇಕಿದೆ. ಜಮೀರ್ ಅಹಮದ್ ಖಾನ್ ಅವರು ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಸಂವಿಧಾನ ಬಾಹಿರವಾಗಿ ಮಾತನಾಡಿದ್ದಾರೆ. ನಾನು ಖಂಡಿಸುತ್ತೇನೆ. ನಾವು ಸ್ಪೀಕರ್ ಸ್ಥಾನಕ್ಕೆ ಗೌರವ ನೀಡುತ್ತಿದ್ದೇವೆಯೇ ಹೊರತು, ಅಲ್ಲಿ ಕುಳಿತುಕೊಳ್ಳುವವರಿಗೆ ಅಲ್ಲ ಎಂದು ಹೇಳಿದ್ದಾರೆ.