ಬೆಂಗಳೂರು: ಚನ್ನಪಟ್ಟಣ ಚುನಾವಣಾ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಜನಾಂಗೀಯ ನಿಂದನೆ ಮಾಡಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ದಳಪತಿಗಳು ಕೆಂಡವಾಗಿದ್ದಾರೆ. ಜೆಡಿಎಸ್ ಟ್ವೀಟ್ ಮಾಡಿದ್ದು, ಸಚಿವ ಜಮೀರ್ ಅಹ್ಮದ್ ಕ್ಷಮಾಪಣೆ ಜೊತೆಗೆ ರಾಜೀನಾಮೆಗೂ ಆಗ್ರಹಿಸಿದೆ.
ಟ್ವೀಟ್ ನಲ್ಲಿ ಏನಿದೆ..?
ಜಮೀರ್ ಅಹ್ಮದ್ ಅವರೇ, ಹೆಚ್.ಡಿ ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಸರ್ವ ಜನಾಗಂದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ, ಇಲ್ಲಿ ನಿಮ್ಮ ಒಡೆದು ಆಳುವ ನೀತಿಗೆ ಜಾಗವಿಲ್ಲ. ಜನಾಂಗೀಯ ನಿಂದನೆ, ವರ್ಣಬೇಧ ಹೇಳಿಕೆಗಳನ್ನು ನೀಡಿ ಅಪಮಾನವೆಸಗಿರುವ ನೀವು ನಾಡಿನ ಜನರಲ್ಲಿ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಟಾಕ್ಸಿಕ್ ಚಿತ್ರತಂಡಕ್ಕೆ ಶಾಕ್ : ಮರಗಳ ಮಾರಣಹೋಮ ಆರೋಪದಲ್ಲಿ ಎಫ್ ಐಆರ್
ಜಮೀರ್ ಹೇಳಿದ್ದೇನು..?
ಯೋಗೇಶ್ವರ್ ನಮ್ಮ ಪಾರ್ಟಿಯಿಂದ ರಾಜಕೀಯ ಪ್ರಾರಂಭ ಮಾಡಿದ್ರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿ ಹೋದ್ರು, ಜೆಡಿಎಸ್ʼಗೆ ಹೋಗಬೇಕು ಅಂತಿದ್ರು. ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ʼಗೆ ಹೋಗಿಲ್ಲ. ಹಿಂದೆ ಹಿಜಾಬ್ ಬೇಡೆ ಪಜಾಬ್ ಬೇಡ ಅಂದಿದ್ದೀಯಾ. ಈಗ ನಿನಗೆ ಮುಸಲ್ಮಾನರ ವೋಟ್ ಬೇಕಾ..?, ಏಯ್ ಕುಮಾರಸ್ವಾಮಿ, ನಿನ್ನ ರೇಟ್ ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡ್ತಾರೆ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು.