ಚಾಮರಾಜಪೇಟೆಯ ಶಾಸಕರ ಕಚೇರಿಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದರು. ನಂತರ ವೈದ್ಯಕೀಯ ಅಗತ್ಯಗಳಿಗಾಗಿ ಹಣ ನೀಡಿ ಸಹಾಯಹಸ್ತ ಚಾಚಿದರು. ಬಳಿಕ ಮಾತನಾಡಿದ ಅವರು ಕ್ಷೇತ್ರದ ಜನರಿಗಾಗಿ ನಾನು ಪ್ರಮಾಣಿಕವಾದ ಸಹಾಯ ಮಾಡುತ್ತಿದ್ದೇನೆ. ಕ್ಷೇತ್ರ ಅಭಿವೃದ್ದಿ ಮಾಡುವುದು ನನ್ನ ಕರ್ತವ್ಯ, ಜವಾಬ್ದಾರಿಯುತವಾಗಿ ನನ್ನ ಕೆಲಸವನ್ನು ಮಾಡಿ ನನ್ನ ಸ್ಥಾನಕ್ಕೆ ನ್ಯಾಯ ದೊರಕಿಸಿಕೊಳ್ಳುತ್ತೇನೆ. ಕ್ಷೇತ್ರವಾಸಿಗಳು ಸಮಸ್ಯೆಗಳಿಂದ ಮುಕ್ತರಾಗಿ ನೆಮ್ಮದಿಯ ಜೀವನ ನಡೆಸಬೇಕೆನ್ನುವುದೇ ನನ್ನ ಉದ್ದೇಶ ಎಂದರು.
