ಇಂದು ಝಿಂಬಾಬ್ವೆ vs ಭಾರತ ಮತ್ತೆ ಮುಖಾಮುಖಿ ಆಗಲಿದೆ. ಮೊದಲ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಝಿಂಬಾಬ್ವೆ ಭರ್ಜರಿ ಜಯ ಸಾಧಿಸಿದೆ.
ಪಡಿತರ ಕಾರ್ಡ್ಗಳ ತಿದ್ದುಪಡಿಗೆ ಕೈಕೊಟ್ಟ ಸರ್ವರ್: ನಿತ್ಯ ಸಾರ್ವಜನಿಕರ ಕಂಪ್ಲೆಂಟ್!
ಇದೀಗ ಈ ಸರಣಿಯ 2ನೇ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿದೆ. ಭಾನುವಾರ ನಡೆಯಲಿರುವ ಈ ಪಂದ್ಯ ಕೂಡ ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲೇ ಜರುಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿರುವ ಝಿಂಬಾಬ್ವೆ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ತವಕದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.