ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಈ ವರ್ಷ ಅಂದರೆ 2024ರ ಸೆಪ್ಟೆಂಬರ್ನಲ್ಲಿ ದೀಪಿಕಾ ಮಗುವಿಗೆ ಜನ್ಮ ನೀಡdಲಿದ್ದಾರೆ ಎಂದು ರಣವೀರ್ ಸಿಂಗ್ ತಿಳಿಸಿದ್ದಾರೆ.
ಈ ವಿಷಯವನ್ನು ರಣವೀರ್ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮಗುವಿಗೆ ಸಂಬಂಧಿಸಿದ ಬಟ್ಟೆ, ಶೂ, ಆಟಿಕೆ, ಟೋಪಿ ಮುಂತಾದ ವಸ್ತುಗಳಿರುವ ಚಿತ್ರವನ್ನು ಶೇರ್ ಮಾಡುವ ಮೂಲಕ ದೀಪಿಕಾ ಹಾಗೂ ರಣವೀರ್ ಮಗುವಿನ ನಿರೀಕ್ಷೆಯಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ‘ಸೆಪ್ಟೆಂಬರ್ 2024 ’ ಎಂದು ಇದರಲ್ಲಿ ಬರೆಯಲಾಗಿದೆ.
2018ರಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಪ್ರೀತಿಸಿ ಮದುವೆ ಆಗಿದ್ದಾರೆ. ಮದುವೆಯಾಗಿ ಆರು ವರ್ಷಗಳ ಬಳಿಕ ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದು ಸದ್ಯ ದೀಪಿಕಾ ಎರಡು ತಿಂಗಳ ಗರ್ಭಿಣಿ. ಇದೇ ವರ್ಷ ಸೆಪ್ಟೆಂಬರ್ನಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.
ದೀಪಿಕಾ ಪಡುಕೋಣೆ ಅವರು ಪ್ರೆಗ್ನೆಂಟ್ ಆಗಿರಬಹುದು ಎಂಬ ಗಾಸಿಪ್ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಇತ್ತೀಚೆಗೆ ಅವರು ಬಾಫ್ಟಾ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲು ತೆರಳಿದ್ದರು. ಆಗ ಅವರು ಸೀರೆ ಧರಿಸಿದ್ದು. ಬೇಬಿ ಗಂಪ್ ಕಾಣಬಾರದು ಎಂಬ ಉದ್ದೇಶದಿಂದಲೇ ಅವರು ಸೀರೆ ಧರಿಸಿದ್ದರು ಎಂದು ಅನೇಕರು ಊಹಿಸಿದ್ದರು. ಜನರ ಊಹೆ ಈಗ ನಿಜವಾಗಿದೆ. ದೀಪಿಕಾ ಪ್ರೆಗ್ನೆಂಟ್ ಆಗಿರುವ ಸುದ್ದಿಯನ್ನು ಸ್ವತಃ ಬಹಿರಂಗಪಡಿಸಿದ್ದಾರೆ. ಸದ್ಯ ಅಭೀಮಾನಿಗಳು, ಸ್ನೇಹಿತರು, ಬಿಟೌನ್ ಮಂದಿ ಸೇರಿದಂತೆ ಸಾಕಷ್ಟು ಜನರು ದಂಪತಿಗಳಿಗೆ ಶುಭ ಹಾರೈಸಿದ್ದಾರೆ.